ಬೆಂಗಳೂರು:ನಾಳೆ  ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಕ್ರಮಕೈಗೊಂಡಿದೆ. ಕೊರೋನಾ ಸಂಕಷ್ಟದಲ್ಲಿಯೂ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಅಂತೆಯೇ ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಸ್ವಂತ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಕುರಿತ ಮಾಹಿತಿಗಾಗಿ ಸಹಾಯವಾಣಿಗಳನ್ನು ಆರಂಭಿಸಲಾಗಿದೆ.

( ಸಾಂದರ್ಭಿಕ ಚಿತ್ರ)