ಬೆಂಗಳೂರು : ನಾಳೆಯಿಂದ ನಗರದಲ್ಲಿ 7 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ. ಅಗತ್ಯ ಸೇವೆಗಳನ್ನು ಹೊರತಾಗಿ ಯಾವುದೇ ಸೇವೆ ದೊರೆಯುವುದಿಲ್ಲ. ಸಿಲಿಕಾನ್ ಸಿಟಿಯ ಜನರು ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರಗೆ ಬಂದ್ರೇ, ವಾಹನಗಳನ್ನು ಸೀಜ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಒದಗಿಸಲು ಅವಕಾಶ ನೀಡಲಾಗಿದೆ. ಅನಗತ್ಯವಾಗಿ ರಸ್ತೆಗೆ ಇಳಿಯ ಬೇಡಿ. ಒಂದು ವೇಳೆ ರಸ್ತೆಗೆ ಇಳಿದ್ರೇ. ಅಂತಹ ವಾಹನಗಳನ್ನು ಸೀಜ್ ಮಾಡಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದರು.