ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಇಲಾಖೆಗೆ ನೀಡಿರುವ ದೂರವಾಣಿ ಸಂಖ್ಯೆಗಳಿಗೆ ನೇರವಾಗಿ ಫಲಿತಾಂಶ ಸಂದೇಶ ಕಳುಹಿಸಲಾಗುತ್ತದೆ. ಸಂದೇಶ ಪಡೆಯದವರು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.