ಬೆಂಗಳೂರು : ನಾಳೆ ಬಜೆಟ್ ನಲ್ಲಿ ಸಾಲ ಮನ್ನಾ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರ ಭಾಷಣದ ಮೆಲೆ ಚರ್ಚೆ ಮುಂದುವರೆಯುತ್ತದೆ. ಬಜೆಟ್ ನಲ್ಲಿ ಸಾಲಮನ್ನಾ ಘೋಷಣೆ ಮಾಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯವ್ಯಾಪಿ ಉಗ್ರ ಹೋರಾಟ ಸಜ್ಜಾಗಿದ್ದೇವೆ. ರೈತರ ಪರವಾಗಿದ್ದೇವೆ ಎಂದು ಹೇಳಿದರು.