ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ,

ಜುಲೈ 23 ರಂದು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ. 24 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ರಾಯಚೂರು, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 24 ರ ಶುಕ್ರವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.