ಚಿತ್ರದುರ್ಗ: ರಾಜ್ಯ ಸೇರಿದಂತೆ ವಿವಿಧೆಡೆಗಳಲ್ಲಿ ಹರಿದು ಹಂಚಿಹೋಗಿರುವ ಭೋವಿ ಸಮಾಜದ ಸಂಘಟನೆ, ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಜು. 18ರಂದು ನಗರದ ಗುರುಪೀಠದಲ್ಲಿ ಭೋವಿ ಜನೋತ್ಸವ ಕಾರ್ಯಕ್ರಮ ಹಾಗೂ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾ ಸಂಸ್ಥಾನ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು 33 ನೇ ವಸಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ.

ಇದೇ ಸಂದರ್ಭದಲ್ಲಿ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ಬೆಳ್ಳಿಗ್ಗೆ 11 ಗಂಟೆಗೆ ಭೋವಿ ಗುರುಪೀಠ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.