ಬೆಂಗಳೂರು: ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ಗಂಟೆಯವರೆಗೆ ಅನುಮತಿಸಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲ ಚಟುವಟಿಕೆಗಳು, ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಈ ಅವಧಿಯಲ್ಲಿ ಕಫ್ರ್ಯೂ ಜಾರಿಗೊಳಿಸಲಾಗಿದೆ.

ಭಾನುವಾರದಂದು ಕೆಎಸ್‍ಆರ್‍ಟಿಸಿ ಬಸ್ ಸಂಚಾರ, ಆಟೋ ರಿಕ್ಷಾ, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ಸೌಲಭ್ಯ ಇರುವುದಿಲ್ಲ.  ಅಲ್ಲದೆ ಅನುಮತಿಸಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲ ಬಗೆಯ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.

ಉಳಿದಂತೆ ಎಲ್ಲ ಅವಧಿಯಲ್ಲಿ ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಅಸ್ವಸ್ಥ್ಯತೆ ಹೊಂದಿರುವವರು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ನಾಳೆ ಭಾನುವಾರ ರಸ್ತೆಗಿಳಿದರೆ ದಂಡ ಬೀಳುವುದು ಗ್ಯಾರಂಟಿ.