ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣವನ್ನು ನಾಳೆ ರಾತ್ರಿ 8ರಿಂದ ಮುಂದಿನ 10 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಈ ವೇಳೆ ತಾಲೂಕಿನ ಶ್ರೀರಾಮನಗರವನ್ನೂ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಲಾಕ್ ಡೌನ್ ವೇಳೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.