ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯ ಸಚಿವ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ವಿವಿಧ ನಿಮಗ, ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.

ಅಶೋಕ ನಿಂಗಯ್ಯ ಪೂಜಾರಿ ಅವರನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಮಾಜಿ ಶಾಸಕ ಭರಮೇಗೌಡ ಕಾಗೆ ಅವರನ್ನು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇನ್ನು ಯು.ಬಿ.ಬಣಕಾರ ಅವರನ್ನು ಕರ್ನಾಟಕ ಕೃಷಿ ಉತ್ಪನ್ನ ಮತ್ತು ಸಂಸ್ಕರಣ ನಿಗರಮದ ಅಧ್ಯಕ್ಷರನ್ನಾಗಿ ನೇಮಿಸಿದೆ.

ಬಸನಗೌಡ ತುರವಿಹಾಳ ಅವರನ್ನು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮುನಿರಾಬಾದ್ ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇನ್ನು ಇದೇ ವೇಳೆ, ಎ.ಎಸ್. ಪಾಟೀಲ್ ಅವರನ್ನು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ನಿಯೋಜಿಸಿದೆ.

ಎಚ್.ಆರ್.ಗವಿಯಪ್ಪ ಅವರನ್ನು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಶಾಸಕ ನಂದೀಶ್ ರೆಡ್ಡಿ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಶರಚ್ ಬಚ್ಚೇಗೌಡ ಅವರನ್ನು ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ತತಕ್ಷಣ ಜಾರಿ ಬರುವಂತೆ ಆದೇಶಿಸಿದೆ.