ಬೆಂಗಳೂರು: ಕಾಂಗ್ರೆಸ್ ಸರಕಾರ ಅವಧಿಯಲ್ಲಿ ನೇಮವಾಗಿದ್ದ ಎಲ್ಲಾ ನಿಗಮ ಮಂಡಲಿ ಅಧ್ಯಕ್ಷರ ಹಾಗೂ ಸದಸ್ಯರ ನೇಮಕ ಸೋಮವಾರ ಕೊನೆ ಆಯಿತು.

91 ನಿಗಮಂಡಲಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ರದ್ದು ಗೊಳಿಸಲಾಗಿದ್ದು, ಹೊಸ ಅಧ್ಯಕರ ನೇಮಕ ಆಗುವವರೆಗೆ ಆಯಾ ನಿಗಮ, ಮಂಡಳಿ, ಸಂಸ್ಥೆಗಳಿಗೆ ಸಂಬಂಧಿಸಿದ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಎಲ್ಲ ನಿಗಮ, ಮಂಡಳಿ ಹಾಗೂ ಸಂಸ್ಥೆಗಳ ಅಧ್ಯಕ್ಷರ ನೇಮಕ ರದ್ದುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.