ಚಿತ್ರದುರ್ಗ: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ನನಗೆ ಕೇವಲ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಹಿರಿಯ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಜೆಹೆಚ್ ಪಟೇಲರ ಸರ್ಕಾರದಲ್ಲಿ ಗೃಹ ಮಂಡಳಿ ಅಧ್ಯಕ್ಷ ಆಗಿದ್ದವನು ನಾನು. ಹಿರಿಯ ರಾಜಕಾರಿಣಿಗಳಲ್ಲಿ ಹೆಚ್ಚು ಬಾರಿ ಗೆದ್ದಿರುವುದು ನಾನೂ ಒಬ್ಬ. ನನಗೆ ಸಚಿವ ಸ್ಥಾನ ನೀಡಿ ಎಂದು ಸಾಕಷ್ಟು ಬಾರಿ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.