ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿನ್ನೆ ನನಗೆ ನಿಶ್ಶಕ್ತಿ ಅನುಭವಕ್ಕೆ ಬಂದಾಗ ವೈದ್ಯರನ್ನು ಭೇಟಿ ಮಾಡಿದ್ದೆ. ನನ್ನ ಆರೋಗ್ಯ ತಪಾಸಣೆ ಮಾಡಿದಾಗ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಯಿಂದ ಸದ್ಯ ನಾನು ಉತ್ತಮವಾಗಿದ್ದೇನೆ. ನಾನು ಇತರರಿಂದ ಪ್ರತ್ಯೇಕವಾಗಿದ್ದೇನೆ ಎಂದು ಗಡ್ಕರಿ ಟ್ವೀಟಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದಿರುವವರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಇರಿ ಎಂದು ಗಡ್ಕರಿ ಹೇಳಿದ್ದಾರೆ.