ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಿಲುಕಿ, ದೇಶ ತೊರೆದಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪಾಸ್ ಪೋರ್ಟನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.

ಹೊಸ ಪಾಸ್ ಪೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನಿತ್ಯಾನಂದ ವಿದೇಶದಲ್ಲಿ ಹೊಂದಿರುವ ಎಲ್ಲಾ ಚಟುವಟಿಕೆಗಳ ಬಗ್ಗೆ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕೇಂದ್ರ ಸರ್ಕಾರ ನಿಲುವಿನಿಂದ ವಿದೇಶದಲ್ಲಿರುವ ನಿತ್ಯಾನಂದನಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.