ಬೆಂಗಳೂರು; ಯಾವ ಊರಿನ ರೇಷನ್ ಕಾರ್ಡ್ ಇದ್ದರೂ ಕಾರ್ಮಿಕರಿಗೆ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಪೋರ್ಟಬಿಲಿಟಿ ಆಧಾರದಲ್ಲಿ ರಾಜ್ಯದ ಯಾವುದೇ ಜಿಲ್ಲೆಯ ಪಡಿತರ ಚೀಟಿ ಹೊಂದಿದ್ದರೂ ಪ್ರಸ್ತುತ ತಾವು ಇರುವ ಊರುಗಳಲ್ಲಿ ಪಡಿತರ ಆಹಾರಧಾನ್ಯ ಪಡೆಯಲು ಅವಕಾಶ ನೀಡಲಾಗಿದೆ.

ಈ ಕುರಿತಾಗಿ ನ್ಯಾಯಬೆಲೆ ಅಂಗಡಿ ಮಾಲೀಕರಿಗೂ ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ