ಬೆಂಗಳೂರು: ಕನ್ನಡ ಹೋರಾಟಗಾರರು ರೋಲ್‍ಕಾಲ್ ಮತ್ತು ನಕಲಿ ಹೋರಾಟಗಾರರು. ಅವರ ಹೋರಾಟಕ್ಕೆ ಅಂಜುವ ಅಗತ್ಯವಿಲ್ಲ ಎಂದು ಹೇಳಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಗುಡುಗಿದ್ದಾರೆ.

ಯತ್ನಾಳ್ ನಾಲಿಗೆ ಮೇಲೆ ಹಿಡಿತವಿಲ್ಲದ, ಮತಿಯನ್ನು ಕಳೆದುಕೊಂಡಿರುವ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.