ಹಾಸನ : ಭಾರತ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಯಾವ ಪ್ರಧಾನಿ ಅಥವಾ ಸಿಎಂಗೂ ಬಗೆಹರಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಅಷ್ಟು ಸುಲಭವಾದುದಲ್ಲ ಅಂತ ಹೇಳುವುದರ ಜೊತೆಗೆ ಇತ್ತೀಚೆಗೆ ಕೇಂದ್ರದ ಜನಪ್ರಿಯತೆ ಕುಗ್ಗುತ್ತಿದೆ. ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಯವರಿಗೆ ಮೀಸಲಾತಿ ನೀಡಲಾಗುತ್ತಿದೆ ಇದೇ ಕಾರಣಕ್ಕೆ ಮರು ಮಾತನಾಡದೇ ಎಲ್ಲಾ ಪಕ್ಷಗಳು ಬೆಂಬಲ ನೀಡಿದ್ದಾರೆ ಎಂದರು. ಹಾಗೂ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನೊಂದಿಗೆ ಮೈತ್ರಿ ಮುಂದುವರೆಯುತ್ತದೆ ಎಂದರು.