ಬೆಂಗಳೂರು: ಇಂದು ತಮಿಳುನಾಡಿನ ಕೆಲ ಭಾಗಗಳಲ್ಲಿ ‘ನಿವಾರ್​’ ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದ್ದು, ನವೆಂಬರ್‌ 26, 27 ಅಂದ್ರೆ 2 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ.ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ನ.26, 27ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ