ಬೆಂಗಳೂರು: ನೀವು ಕೆಲಸದಲ್ಲಿದ್ದು ಆರ್ಥಿಕ ಸಂಕಷ್ಟದಲ್ಲಿದ್ದರೆ, ಕೆಲಸ ಬಿಟ್ಟು ಬೇರೆ ಕೆಲಸಕ್ಕೆ ಹೋಗುವ ಸಮಯದಲ್ಲಿ ಹಣದ ಅಡಚಣೆ ಇದ್ದರೆ ಇನ್ನೇಕ ತಡ ಪಿಎಫ್ ಹಣ ಇದೆಯಲ್ಲಾ.! ಸದಸ್ಯರು ಒಂದು ತಿಂಗಳಿಗಿಂತ ಹೆಚ್ಚು ಸಮಯ ನಿರುದ್ಯೋಗಿಗಳಾಗಿದ್ದಲ್ಲಿ ಪ್ರಾವಿಡೆಂಟ್ ಫಂಡ್ ಖಾತೆಯಲ್ಲಿರುವ ಒಟ್ಟು ಮೊತ್ತದಲ್ಲಿ ಶೇ 75ರಷ್ಟು ಹಣವನ್ನು ಹಿಂದಕ್ಕೆ ಪಡೆಯಬಹುದೆಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‍ಒ) ಹೇಳಿದೆ.

ಈಗಿನ ನಿಯಮಗಳ ಪ್ರಕಾರ ಸದಸ್ಯರು ಎರಡು ತಿಂಗಳುಗಳ ಕಾಲ ಉದ್ಯೋಗ ಹೊಂದಿರದೇ ಇದ್ದ ಪಕ್ಷದಲ್ಲಿ ಮಾತ್ರ ಅವರು ತಮ್ಮ ಸಂಪೂರ್ಣ ಪಿಎಫ್ ಮೊತ್ತವನ್ನು ಹಿಂದಕ್ಕೆ ಪಡೆಯಬಹುದಾಗಿದೆ. ಹೊಸ ನಿಯಮ ಜಾರಿಗೆ ಬಂದರೂ ಈಗಿನ ನಿಯಮ ಊರ್ಜಿತದಲ್ಲಿರುತ್ತದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಕುಮಾರ್ ಗ್ಯಾಂಗ್ವಾರ್ ಅವರ ನೇತೃತ್ವದಲ್ಲಿ ನಡೆದ ಇಪಿಎಫ್‍ಒ ಕೇಂದ್ರ ಟ್ರಸ್ಟಿಗಳ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಮೂಲಗಳು ಹೇಳಿವೆ.

( ಸಾಂದರ್ಭಿಕ ಚಿತ್ರ)