ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಜುಲೈ 12ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗಾಗಿ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಈ ಮುಂಚೆ ಮೇ 28ರೊಳಗೆ ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.

ಆದರೆ ಇದೀಗ ಜೂನ್ 11ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ http://www.schooleducation.kar.nic.in/index.htmlಗೆ ಸಂಪರ್ಕಿಸಬಹುದು.