ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇ ಪ್ರಕ್ರಿಯೆಯನ್ನು ಆಹಾರ ಇಲಾಖೆಯು ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸುವ ಸಾಧ್ಯತೆಯಿದೆ. ಜತೆಗೆ, ಆನ್‌ಲೈನ್‌ನಲ್ಲಿಯೂ ಹೊಸದಾಗಿ ಅರ್ಜಿ ಸಲ್ಲಿಸುವ ಸಂಬಂಧ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಕರೊನಾ ಸೋಂಕಿತರ ಸಂಖ್ಯೆ ಇಳಿಕೆ ಹಾಗೂ ಆನ್‌ಲಾಕ್ ತೆರವು ಹಿನ್ನೆಲೆಯಲ್ಲಿ ಹಿಂದಿನ ವ್ಯವಸ್ಥೆಯಂತೆ ಎಲ್ಲ ವಹಿವಾಟುಗಳು ನಡೆಯುತ್ತಿರುವುದರಿಂದ ಬಾಕಿ ಅರ್ಜಿಗಳ ವಿಲೇ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ ಮೊದಲ ವಾರದಲ್ಲಿ ಅನುಮತಿ ಸಿಗುವ ನಿರೀಕ್ಷೆ ಇದೆ . ರೇಷನ್ ಕಾರ್ಡ್‌ಗಾಗಿ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್, ವಾರ್ಷಿಕ ಆದಾಯ ಮತ್ತು ವಾಸ ಸ್ಥಳ ದೃಢೀಕರಣ ಪತ್ರ ಬೇಕಾಗಿದೆ..!