ಬೆಂಗಳೂರು: ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನ ಇಂದು ತೆರೆಯಲು ಸಜ್ಜಾಗಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ಯಾತ್ರಾಸ್ಥಳವು ವರ್ಚುವಲ್ ಸರದಿ ವ್ಯವಸ್ಥೆಗೆ ಒಳಪಟ್ಟಿದೆ.

ಹೀಗಾಗಿ ಜನಸಂದಣಿಗೆ ಕಡಿವಾಣ ಹಾಕಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಕಳೆದ 24 ಗಂಟೆಯ ಒಳಗೆ ಕೋವಿಡ್ ಪ್ರಮಾಣಪತ್ರವನ್ನು ಹೊಂದಿರಬೇಕು.

ಭಕ್ತರಿಗೆ ಚಾರಣಕ್ಕೂ ಮುನ್ನ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣ ಸೇರಿದಂತೆ ಅನೇಕ ಕಡೆ ಆಂಟಿಜೆನ್ ಪರೀಕ್ಷೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.