ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಹೊಸ ನಿಯಮ ಜಾರಿಗೆ ತಂದಿದೆ..

ರಾಜ್ಯ ಸರ್ಕಾರವು ಬಸ್ ಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಬಸ್ ಗಳಲ್ಲಿ ಸಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು. ಬಸ್ ನಲ್ಲಿ ಪ್ರಯಾಣಿಕರು ಸೀಟ್ ಬಿಟ್ಟು ಸೀಟ್ ಕುಳಿತುಕೊಳ್ಳಬೇಕು. ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಇಲ್ಲದವರನ್ನು ಬಸ್ ನಲ್ಲಿ ಹತ್ತಿಸಿಕೊಳ್ಳಲಾಗುವುದಿಲ್ಲ.!