ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಇಂದು ಅಧಿಕಾರ ಸ್ವೀಕರಿಸಿದರು.

2010ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಪ್ರಸ್ತುತ ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ಹಾಗೂ  2013ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.