ಬೆಂಗಳೂರು : ಹೀಗೊಂದು ಚರ್ಚೆಗೆ ಪೂರಕ ಎಂಬಂತೆ ಮುಖ್ಯ ಮಂತ್ರಿ ಯಡಿಯೂರಪ್ಪರು ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗೆ ಪತ್ರಬರೆದಿದ್ದಾರೆ.

ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದೆ. ಇದೇ ಕಾರಣದಿಂದ ಜಿಲ್ಲೆಯ ಅನೇಕ ತಾಲೂಕಿನ ಜನರಿಗೆ ಜಿಲ್ಲಾ ಕೇಂದ್ರ ತಲುಪೋದು ಕಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ 11 ತಾಲೂಕುಗಳನ್ನು ವಿಭಾಗಿಸಿ, ನೂತನ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ರಚಿಸುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಠಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಐದು ತಾಲೂಕುಗಳನ್ನು ( ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ) ಉಳಿಸಿಕೊಂಡು, ಉಳಿದ ಆರು ತಾಲೂಕುಗಳನ್ನು ( ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ) ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು, ನೂತನ ವಿಜಯನಗರ ಜಿಲ್ಲೆಯನ್ನು ರಚಿಸುವುದು ತುಂಬಾ ಅಗತ್ಯವಿರುತ್ತದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ವಿಷಯವನ್ನು ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಎಸ್ ಗೆ ಸೂಚಿಸಿದ್ದಾರೆ.!