ನವದೆಹಲಿ; ನೆರೆ ಪರಿಶೀಲನೆಗೆ ಕೇಂದ್ರದಿಂದ ವಿಶೇಷ ಅಧ್ಯಯನ ತಂಡ ಬರಲಿದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದರು.

ಪ್ರಧಾನಿ ಮೋದಿ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಅವರು ನೆರೆ ಹಾವಳಿಯಿಂದ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. 

ಹಣ ಬಿಡುಗಡೆ ಬಗ್ಗೆ ಚರ್ಚೆ ಮಾಡಿ ಹೇಳುತ್ತೇವೆ ಎಂದಿದ್ದು, ನೆರೆ ಹಾನಿ ಅಧ್ಯಯನಕ್ಕೆ ಕೂಡಲೇ ವಿಶೇಷ ಅಧ್ಯಯನ ತಂಡವನ್ನು ಕಳುಹಿಸಲಿದ್ದಾರೆ ಎಂದರು.

ತತ್‌ಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕೇಳಿದ್ದು, ಅವರು ಕೂಡಲೇ ಸ್ಪಂದಿಸುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.