ಬಾಗಲಕೋಟೆ:  ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಅವರು ಮದುವೆ ಮತ್ತು  ಸೀಮಂತ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾಗಿರುವ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ಮೇರೆಗೆ ಈ ಆದೇಶ ಹೊರಡಿಸಿದ್ದು, ಇನ್ನು ಮುಂದೆ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರವೇ ಮದುವೆ ಮಾಡಿಕೊಳ್ಳಬೇಕು ಹಾಗೂ ಜಿಲ್ಲೆಯಲ್ಲಿ ಯಾರೇ ಮೃತಪಟ್ಟರೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದೂ ಸೂಚಿಸಿದ್ದಾರೆ.