ಬೆಂಗಳೂರು : ನೋಟ್ ಬ್ಯಾನ್  ಆಗಿ ಎರಡು ವರ್ಷವಾಗಿದೆ.  ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ನೋಟ್ ಬ್ಯಾನ್ ನಿಂದ ಜನರಿಗಾದ ಸಂಕಷ್ಟ ಅಷ್ಟಿಷ್ಟಲ್ಲ. ಇದಕ್ಕಾಗಿ ನೂರಾರು ಜನ ಸಾವನ್ನಪ್ಪಿದ್ದಾರೆ. ಸಹಾಸ್ರಾರು ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ. ವಿವಾಹಗಳು ಮುರಿದು ಬಿದ್ದಿವೆ. ರೋಗಿಗಳು ಸಾವನ್ನಪ್ಪಿದ್ದಾರೆ, ಹಣ ಕಟ್ಟಲಾಗದೇ ವಿದ್ಯಾರ್ಥಿಗಳು ಶಾಲೆಯಿಂದ ಹೊರಬಿದ್ದಿದ್ದಾರೆ. ಹಸವಿನಿಂದ ಜನ ಕಂಗೆಟ್ಟಿದ್ದಾರೆ ಎಂದು ಹೇಳಿದ್ದಾರೆ.

ನೋಟ್ ಬ್ಯಾನ್ ನಿಂದ ರೈತರ ಬದುಕು ಛಿದ್ರವಾಯಿತು. ಹಲವರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದು ನಿಮ್ಮ ನೋಟ್ ಬ್ಯಾನ್ ನ ಪರಿಣಮಾ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಹೇಳಿದ್ದಾರೆ