ಬೆಂಗಳೂರು: ಈ ಭಾರಿ ಮಳೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನವೆಂಬರ್ 1 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿರಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ