ಚಿತ್ರದುರ್ಗ: 2019-20ನೇ ಸಾಲಿನ ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಟೇಬಲ್ (ಕೆಎಸ್‍ಆರ್‍ಪಿ, ಐಆರ್‍ಬಿ) (ಪುರುಷ ಮತ್ತು ಮಹಿಳೆ)-2420 ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುತ್ತದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ನವೆಂಬರ್ 22ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ಚಿತ್ರದುರ್ಗ ನಗರದ ಒಟ್ಟು 22 ಶಾಲಾ, ಕಾಲೇಜುಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಅಧೀಕ್ಷಕರಾದ ಜಿ.ರಾಧಿಕಾ ತಿಳಿಸಿದ್ದಾರೆ.

 ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ರೀತಿಯ ಪುಸ್ತಕ, ಕೈಬರಹ ಚೀಟಿ, ಪೇಜರ್, ಕ್ಯಾಲ್ಕುಲೇಟರ್, ಇಯನ್ ಫೋನ್‍ಗಳನ್ನು ಪರೀಕ್ಷೆ ತರಲು ನಿಷೇಧಿಸಲಾಗಿರುತ್ತದೆ.

 ಅಭ್ಯರ್ಥಿಗಳು ಬೆಲೆ ಬಾಳುವ ವಸ್ತು, ಸಾಮಾಗ್ರಿಗಳನ್ನು ತರದಂತೆ ತಿಳಿಸಲಾಗಿದೆ. ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ತಮ್ಮ ಕರೆ ಪತ್ರದಲ್ಲಿ ನಮೂದಾಗಿರುವ ಕಾಲೇಜಿನಲ್ಲಿ ಹಾಜರಿರಲು ಹಾಗೂ ಕರೆ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಮತ್ತು ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.