ಬೆಳಗಾವಿ: ಪಕ್ಷ ಅಂತ  ಮೇಲೆ ರಾಜಕಾರಣದಲ್ಲಿ ಸ್ವಲ್ಪ ಭಿನ್ನಾಭಿಪ್ರಾಯಗಳು ಇರುತ್ತವೆ ಎಂದು ಶಾಸಕಿ  ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ತಾಯಿಯ ಮಕ್ಕಳಲ್ಲಿ ಹೊಂದಾಣಿಕೆ ಇರುವುದಿಲ್ಲ. ಇನ್ನು ರಾಜಕಾರಣದಲ್ಲಿ ಎಲ್ಲರೂ ಒಂದೇ ರೀತಿ ಯೋಚಿಸಬೇಕೆಂದರೆ ಅದು ಹೇಗೆ ಸಾಧ್ಯ ಎಂದರು. ಮುಂದು ವರೆದು ಪಕ್ಷದ ನಾಯಕರ ಮಾತಿಗೆ ಬೆಲೆ ಕೊಟ್ಟು, ಜಾರಕಿಹೊಳಿ ಸಹೋದರರು ಮತ್ತು ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು