ಬೆಂಗಳೂರು : ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಸೇರಿದಂತೆ ಒಂದು ವಾರ ಲಾಕ್ ಡೌನ್ ಇರುವ ಎಲ್ಲ ಜಿಲ್ಲೆಗಳಲ್ಲೂ ಎಂದಿನಂತೆ ಪಡಿತರ ಆಹಾರ ಧಾನ್ಯ ವಿತರಣೆ ನಡೆಯಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಈಗಾಗಲೇ ಸರ್ಕಾರ ಘೋಷಿಸಿರುವಂತೆ ಬಿಪಿಎಲ್ ಪಡಿತರ ಚೀಟಿದಾರರಿಗೆ ತಲಾ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ ವಿತರಣೆಯಾಗಲಿದೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ ತಿಂಗಳಿಗೆ 33 ಕೆಜಿ ಅಕ್ಕಿ ಮತ್ತು ಎರಡು ಕೆಜಿ ರಾಗಿ ಅಥವಾ ಗೋಧಿ ವಿತರಿಸಲಾಗುವುದು ಎಂದು ಹೇಳಿದರು.