ಬೆಂಗಳೂರು : ಪಡಿತರ ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಉಚಿತವಾಗಿ ನೀಡಲಾಗುತ್ತಿರುವ ಆಹಾರ ಧಾನ್ಯಗಳನ್ನು ಮಾರ್ಚ್ ವರೆಗೂ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ಕೊರೊನಾ ವೈರಸ್ ಲಾಕ್ ಡೌನ್ ನಿಂದ ಜನರು ಸಂಕಷ್ಟದಲ್ಲಿದ್ದು, ಮಾರ್ಚ್ ವರೆಗೆ ಉಚಿತ ಆಹಾರ ಧಾನ್ಯಗಳನ್ನು ವಿಸ್ತರಿಸುವಂತೆ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಪ್ರಧಾನಿ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಡಿತರ ಕಾರ್ಡ್ ದಾರರಿಗೆ ನವೆಂಬರ್ ತಿಂಗಳವರೆಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುವುದಾಗಿ ಘೋಷಣೆ ಮಾಡಿತ್ತು. ಇದೀಗ ಮತ್ತೆ ಮಾರ್ಚ್ ತಿಂಗಳವರೆಗೆ ಈ ಯೋಜನೆ ವಿಸ್ತರಿಸುವಂತೆ ಮನವಿ ಮಾಡಲಾಗಿದೆ.