ಬೆಂಗಳೂರು; ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಎರಡು ಕೆಜಿ ಅಕ್ಕಿಯನ್ನು ಕಡಿತಗೊಳಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಪ್ರತಿ ತಿಂಗಳು ಬಿಪಿಎಲ್ ಕಾರ್ಡುದಾರರಿಗೆ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಆದರೆ, ಈಗ 3 ಕೆಜಿ ಅಕ್ಕಿ ನೀಡಿ ಜೊತೆಗೆ 2 ಕೆಜಿ ರಾಗಿ ಇಲ್ಲವೇ ಜೋಳ ನೀಡಲು ತೀರ್ಮಾನಿಸಿದ್ದು, ಜುಲೈ 1 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎನ್ನಲಾಗುತ್ತಿದೆ.