ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಫಡಿತರ ಫಲಾನುಭವಿಗಳಿಗೆ ವಿಟಮಿನ್, ಕಬ್ಬಿಣಾಂಶ ಮತ್ತು ಪೌಷ್ಠಿಕಾಂಶಗಳನ್ನು ಒಳಗೊಂಡ ಸಾರವರ್ಧಕ ಅಕ್ಕಿ ವಿತರಿಸಲು ಯೋಜಿಸಿದೆ.

ಪಡಿತರ ಫಲಾನುಭವಿಗಳಿಗೆ ಸೂಕ್ಷ್ಮ ಪೋಷಕಾಂಶಗಳು ಮತ್ತು ಕಬ್ಬಿಣಾಂಶದಿಂದ ಸಾರವರ್ಧನೆಗೊಳಿಸಿದ ಅಕ್ಕಿಯನ್ನು ಪಡಿತರ ಫಲಾನುಭವಿಗಳಿಗೆ ನೀಡುವ ಮೂಲಕ ಅಪೌಷ್ಠಿಕತೆ ಸಮಸ್ಯೆ ನಿವಾರಿಸುವುದು ಯೋಜನೆಯ ಉದ್ದೇಶವಾಗಿದೆ. ಈ ಯೊಜನೆಯನ್ನು ಪ್ರಾಯೋಗಿಕವಾಗಿ ತುಮಕೂರು ಅಥವಾ ಯಾದಗಿರಿ ಜಿಲ್ಲೆಯಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ  ಎಂದು ತಿಳಿದುಬಂದಿದೆ.