ಬೆಂಗಳೂರು: ಪದವಿ ಕಾಲೇಜುಗಳ ಖಾಯಂ ಉಪನ್ಯಾಸಕರ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ನಿನ್ನೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದ್ದು, ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಪದವಿ ಕಾಲೇಜುಗಳ ಖಾಯಂ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ, ಸದ್ಯ ಜಾರಿಯಲ್ಲಿರುವ ಉಪನ್ಯಾಸಕರ ವರ್ಗಾವಣೆ ನಿಯಮವನ್ನೂ ಕೂಡ ರದ್ದುಗೊಳಿಸಲಿದ್ದು, ಹೊಸ ನಿಯಮ ಜಾರಿ ಮಾಡಲಿದ್ದೇವೆ. ಈ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದೇವೆ ಎಂ