ಚಿತ್ರದುರ್ಗ:  ಮೊಳಕಾಲ್ಮೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಿಂದ ವಾಪಸ್ಸು ಬರುವ ವೇಳೆ  ಟಾಟಾ ಏಸ್  ಪಲ್ಟಿ ಆದ ಪರಿಣಾಮದಿಂದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರಗಾಯಗಳಿವೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ನಲ್ಲಿ ಇಂದು ನಡೆದ ಪರಿವರ್ತನಾ ಯಾತ್ರೆ ಮುಗಿಸಿಕೊಂಡು ವಾಪಸ್ಸು ಹೊನ್ನೂರು ಗ್ರಾಮಕ್ಕೆ ಮರಳುತ್ತಿದ್ದಾಗ  ನೇರ್ಲಹಳ್ಳಿ ಕ್ರಾಸ್ ಬಳಿ  ಟಾಟ ಏಸ್ ಪಲ್ಟಿಯಾಗಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರವಾಗಿದೆ.

ಟಾಟಾ ಏಸ್ ನಲ್ಲಿ ಒಟ್ಟು 20 ಕ್ಕೂ ಹೆಚ್ಚು ಜನರಿದ್ದರು ಎಂದು ತಿಳಿದುಬಂದಿದೆ. ಟಾಟಾಏಸ್ ನಲ್ಲಿದ್ದ ,17ಜನರಿಗೆ ಗಾಯಗಳಾಗಿದ್ದು ಅವರನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ. , ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.