ಬೆಂಗಳೂರು : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಸುತ್ತೋಲೆ ಹೊರಡಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ಮನವಿ ಮಾಡಿದ್ದಾರೆ.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ತಿಂಗಳಿನಿಂದ ಪ್ರಾರಂಭಗೊಳ್ಳಲಿದ್ದು, ಪ್ರತಿದಿನ ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳು ಪಡೆದುಕೊಂಡಿರುವ ಬಸ್ ಪಾಸ್ ಗಳಲ್ಲಿ ನಿಗದಿತ ಅಂದರೆ ತಮ್ಮ ಪಾಸ್ ನಲ್ಲಿ ನಮೂದಿತ ಮಾರ್ಗಗಳ ಹೊರತಾಗಿ ಬದಲಾದ ಮಾರ್ಗಗಳಲ್ಲಿ ಸಂಚರಿಸುವಂತೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.