ನವದೆಹಲಿ : ದೇಶದಾದ್ಯಂತ ಜನವರಿ 16 ರಿಂದ ದೇಶದಾದ್ಯಂತ ಕೊರೊನಾ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಇದೇ ಜನವರಿ 17 ರಂದು ನಡೆಯಬೇಕಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಮುಂದಿನ ಸೂಚನೆವರೆಗೆ ಮುಂದೂಡಲು ನಿರ್ಧರಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗೆ ಜನವರಿ 9 ರಂದು ಪತ್ರ ರವಾನಿಸಲಾಗಿದೆ.

ಜನವರಿ 16 ರಿಂದ ದೇಶಾದ್ಯಂತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಅರೋಗ್ಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ.