ಚಿತ್ರದುರ್ಗ: ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಅಂದರೆ ಸುಮ್ಮನಿರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಶ್ರೀರಾಮುಲು, ಅಂತಹ ದೇಶದ್ರೋಹಿಗಳನ್ನು ಬಂಧಿಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಿಎಎ ಪರ ನಿಂತಿರುವ ಕೆಲವರು ಹುಬ್ಬಳಿಯಲ್ಲಿ ಪಾಕಿಸ್ತಾನಕ್ಕೆ ಜೈ ಅಂದಿದ್ದಾರೆ. ಇಂತಹ ದೇಶದ್ರೋಹದ ಕೆಲಸ ಮಾಡಿದರೆ ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ, ತಕ್ಷಣ ಬಂಧಿಸುತ್ತೇವೆ ಎಂದು ಹೇಳಿದ್ದಾರೆ.