ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ ಐ) ಹುದ್ದೆಗಳ ನೇಮಕಾತಿಗೆ ನಡೆಸಲಾಗುತ್ತಿದ್ದ ಸಂದರ್ಶನ ಪ್ರಕ್ರಿಯೆಯನ್ನು ಈ ವರ್ಷದಿಂದ ರದ್ದುಪಡಿಸಲಾಗಿದೆ.

ರಾಜ್ಯ ಸರ್ಕಾರದ ಗ್ರೂಪ್ ಸಿ ದರ್ಜೆಯ ಹುದ್ದೆಗಳ ಪಟ್ಟಿಯಲ್ಲಿರುವ ಪಿಎಸ್ಐ ನೇಮಕಾತಿ ಪ್ರಕ್ರಿಯೆ ಆರಂಭವಾದಾಗಿನಿಂದ ಸಂದರ್ಶನ ನಡೆಸಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಗ್ರೂಪ್ ಸಿ ಮತ್ತು ಡಿ ದರ್ಜೆ ಹುದ್ದೆ ನೇಮಕದ ವೇಳೆ ಸಂದರ್ಶನ ನಡೆಸಬಾರದು ಎಂದು ಆದೇಶ ಹೊರಡಿಸಿದೆ.

ಇದನ್ನು ಆಧರಿಸಿ ಪೊಲೀಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದೆ.