ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕಿಗೆ ಒಳಗಾದ ಹಾಗೂ ಸೋಂಕಿತರ ಸಂಪರ್ಕದ ಶಂಕೆಯ ಮೇಲೆ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾದವರ ಮೇಲೆ ನಿಗಾ ಇರಿಸುವ ಕೆಲಸಕ್ಕೆ ಪಿಯುಸಿ ಉಪನ್ಯಾಸಕರಿಗೆ ನೀಡಲಾಗುತ್ತದೆ.!

ಹಾಗಾಗಿ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ನಿಯೋಜಿಸಲು ಸೂಚಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಪರೀಕ್ಷೆ) ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿದ್ದಾರೆ.!