ಬೆಂಗಳೂರು: ಪಿಯುಸಿ ಉಪನ್ಯಾಸಕರ‌ ನೇಮಕಾತಿ ಕೌನ್ಸೆಲಿಂಗ್ ಅನ್ನು ಜುಲೈ7ರಂದು‌ ನಡೆಸಲು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ‌ ನೀಡಿದ್ದಾರೆ.

ಕೊರೋನಾ ಸೋಂಕಿನ ಭೀತಿ ಹಿನ್ನೆಲೆ  ಸಾಮಾಜಿಕ ಅಂತರ ಪಾಲಿಸಿಕೊಂಡು ಕೌನ್ಸೆಲಿಂಗ್ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಹೆಚ್ಚುವರಿ ಪ್ರಕ್ರಿಯೆಗಳನ್ನು ಆನ್ ಲೈನ್ ಮೂಲಕ ನಡೆಸುವಂತೆ ಸಚಿವರು ನಿರ್ದೇಶಿಸಿದ್ದಾರೆ ಎಂದು ತಿಳಿದುಬಂದಿದೆ.