ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ಪಿಯುಸಿ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಿಡುಗಡೆ ಮಾಡಲಾಗುವುದು ಅಂತ ಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಇಂದು ಅವರು ಅನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಸರ್ಜಾಪುರ, ದೊಮ್ಮಸಂದ್ರ ಸೇರಿ ಹಲವು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟು, ಪರೀಕ್ಷಾ ಕೇಂದ್ರದ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮತ್ತು ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಹಾಗೂ ಈ ಬಾರಿ ಎಕ್ಸಾಂ ಬರೆಯದ ವಿದ್ಯಾರ್ಥಿಗಳಿಗೆ ಮುಂದಿನ ಬಾರಿ ಅಗಸ್ಟ್ ತಿಂಗಳ ಪೂರಕ ಎಕ್ಸಾಂನಲ್ಲಿ ಅವಕಾಶ ನೀಡಲಾಗುವುದು ಹಾಗೂ ಆಗ ಅವರನ್ನು ಫೆಶ್ ಕ್ಯಾಂಡಿಡೆಟ್ ಎಂದು ಪರಿಗಣನೆ ಮಾಡಲಾಗುತ್ತದೆ ಅಂತ ತಿಳಿಸಿದರು.