ಬೆಂಗಳೂರು : ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫೆ. 10 ರಿಂದ ಫೆ.20 ರ ತನಕ ನಡೆಯಲಿದ್ದು, ಜ. 2 ರಿಂದ ಜ. 10 ರ ವರೆಗೆ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಗಿಸುವಂತೆ ಇಲಾಖೆ ಸೂಚಿಸಿದೆ. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್ ವೀಕ್ಷಿಸಲು ಪ್ರಕಟಣೆ ತಿಳಿಸಿದೆ.

ಇನ್ನು ದ್ವಿತೀಯ ಪಿಯುಸಿ ಪೂರ್ವಭಾವಿ ಪರೀಕ್ಷೆ ಜನವರಿ 10 ರಿಂದ ಜ. 21 ರ ತನಕ ನಡೆಯಲಿದ್ದು, ಪ್ರಾಯೋಗಿಕ ಪರೀಕ್ಷೆಗಳು ಜ.25 ರಿಂದ ಫೆ. 10 ರೊಳಗೆ ನಡೆಯಲಿದೆ. ಪರೀಕ್ಷೆಗಳನ್ನು ಆಯಾ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನಿಗದಿತ ದಿನಾಂಕದಂದೇ ಪರೀಕ್ಷೆ ನಡೆಸುವಂತೆ ಇಲಾಖೆ ನಿರ್ದೇಶನ ನೀಡಿದೆ.