ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಆಯುಷ್ ಇಲಾಖೆ 275 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 14 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ.

ಅಭ್ಯರ್ಥಿಗಳು ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿಎಎಂಎಸ್, ಬಿಯುಎಂಎಸ್, ಬಿಎಚ್‌ಎಂಎಸ್, ಬಿಎನ್‌ವೈಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.