ಬೆಂಗಳೂರು: ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.

10ನೇ ತರಗತಿಯವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದೆ. ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ವಿತರಿಸಬೇಕು ಎಂದು ಹಲವು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸುವ ಕುರಿತು ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆದಿದೆ. ಸಿಎಂ ಬಿ.ಎಸ್​. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಈ ಕುರಿತು ನಿರ್ಣಯ ತೆಗೆದುಕೊಳ್ಳುತ್ತೇವೆ ಅಂತ ಅವರು ಹೇಳಿದರು.