ಬೆಂಗಳೂರು:ಪಿಯು ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ಕರ್ತವ್ಯಕ್ಕೆ ನಿಯುಕ್ತಿಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅನುಮೋದನೆ ನೀಡಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆ ಅಥವಾ ನಾಡಿದ್ದು ಅಧಿಕೃತವಾಗಿ ಕೌನ್ಸೆಲಿಂಗ್ ದಿನಾಂಕ ಘೋಷಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನಡೆದಿದೆಯಾದರೂ ಕರ್ತವ್ಯದ ಸ್ಥಳ ನಿಯುಕ್ತಿಗೊಳಿಸಲಾಗಿಲ್ಲ.