ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾ. 26 ರಿಂದ ಆರಂಭವಾಗಲಿದ್ದು, ಏಪ್ರಿಲ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿಯಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಟ್ಟು 4, 725 ಕಾಲೇಜಿನ 6,90,150 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಒಟ್ಟು 1,004 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರತಿ ಪರೀಕ್ಷೆಗೆ ಸರಾಸರಿ ಶೇ 1-2 ವಿದ್ಯಾರ್ಥಿಗಳು ಗೈರಾಗಿದ್ದರು. ಈ ವರ್ಷವೂ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮಾ. 26 ರಿಂದ ಮೌಲ್ಯಮಾಪನ ಪ್ರಾರಂಭವಾಗಲಿದೆ ಎಂದರು.

ಒಟ್ಟಿನಲ್ಲಿ ಪಿಯು  ಪರೀಕ್ಷೆ ಫಲಿತಾಂಶಕ್ಕೆ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಿಂತ, ಪೋಷಕರಿಗೆ ಹೆಚ್ಚು ಕಾತುರ ಜಾಸ್ತಿ ಆಗಿದೆಯಂತೆ.!