ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಿಯು ಮಂಡಳಿ ನಿರ್ದೇಶಕಿ ಸಿ.ಶಿಖಾ, ಒಟ್ಟು ಶೇ.61.73ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದರು.

ಶೇ.68.24ರಷ್ಟು ಬಾಲಕಿಯರು ಹಾಗೂ ಶೇ.55.29ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಇನ್ನು ಉಡುಪಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ದ್ವಿತೀಯ ಸ್ಥಾನ ದಕ್ಷಿಣ ಕನ್ನಡ ಹಾಗೂ ಕೊನೆಯ ಸ್ಥಾನ ಚಿತ್ರದುರ್ಗ ಜಿಲ್ಲೆಯ ಪಾಲಾಗಿದೆ ಎಂದರು.