ಬೆಂಗಳೂರು: ಪೊಲೀಸರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪೊಲೀಸ್​ ಇಲಾಖೆಯ ಕೆಲ ಹುದ್ದೆಗಳ ವೇತನ ಶ್ರೇಣಿಯನ್ನು ಮೇಲ್ದರ್ಜೆಗೇರಿಸಲಾಗಿದೆ.

ಈ ಪರಿಷ್ಕೃತ ವೇತನ ಆ.​ 1ರಿಂದಲೇ ಅನ್ವಯವಾಗುವಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಪರಿಷ್ಕೃತ ವೇತನವನ್ನು ಈ ತಿಂಗಳಿನ ಸಂಬಳದಲ್ಲಿ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಇದರೊಂದಿಗೆ ರಾಜ್ಯ ಪೊಲೀಸ್​ ಇಲಾಖೆಗೆ ಬಹುದಿನಗಳ ಬೇಡಿಕೆ ಈಡೇರಿಸಿದೆ ಸರಕಾರ.!